Belagavi NewsBelgaum NewsKannada NewsKarnataka News
*ಬೆಳಗಾವಿ ಜಿಲ್ಲೆಯಲ್ಲಿ ಬೆಳೆ ಹಾನಿ ವೀಕ್ಷಿಸಿದ ಬಿಜೆಪಿ ತಂಡ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕು ಹಾಗೂ ರಾಮದುರ್ಗ ತಾಲೂಕಿನಲ್ಲಿ ಬಿಜೆಪಿ ನಿಯೋಗ ಬೆಳೆ ಹಾನಿ ವೀಕ್ಷಣೆ ಮಾಡಿದೆ.
ಯರಗಟ್ಟಿ ತಾಲೂಕಿನ ಸೊಪಡ್ಲ ಗ್ರಾಮದಲ್ಲಿ ರಾಮದುರ್ಗ ತಾಲೂಕಿನ ಚಂದರಗಿ ಹಾಗೂ ಕಡಕೋಳ ಗ್ರಾಮದಲ್ಲಿ ಬೆಳೆ ಹಾನಿ ವಿಕ್ಷಣೆ ಮಾಡಲಾಯಿತು.
ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಶಾಸಕರಾದ ಶಶಿಕಲಾ ಜೊಲ್ಲೆ, ವಿಠ್ಠಲ ಹಲಗೇಕರ, ದುರ್ಯೋಧನ ಐಹೊಳೆ, ಮಾಜಿ ಶಾಸಕರಾದ ಸಂಜಯ ಪಾಟೀಲ, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ (ನಡಹಳ್ಳಿ), ವಿಭಾಗ ಸಹ ಪ್ರಭಾರಿ ಬಸವರಾಜ ಯಂಕಂಚಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ, ರೈತರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.



