Kannada NewsLatest

ಶನಿವಾರ ಬಿಜೆಪಿ ಕಾರ್ಯಕರ್ತರ ಅಭಿನಂದನಾ ಸಮಾರಂಭ

 

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 
 ಈ ಬಾರಿ ನಡೆದ ೨೦೧೯ನೇ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಐತಿಹಾಸಿಕ ಗೆಲುವಿಗೆ ಸಾಕ್ಷಿಯಾಗಿರುವ ಹಾಗೂ  ಗೆಲುವಿಗಾಗಿ ಶ್ರಮಿಸಿರುವ ಕಾರ್ಯಕರ್ತರ ಅಭಿನಂದನಾ ಸಮಾರಂಭವು ಶನಿವಾರ ನಡೆಯಲಿದೆ.

Home add -Advt

ಬೆಳಗಾವಿ ನಗರದ ಮಹಾತ್ಮ ಗಾಂಧಿ ಭವನದಲ್ಲಿ  ಅಂದು ಮುಂಜಾನೆ 10ಗಂಟೆಗೆ  ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ.

  ಕೇಂದ್ರದ ರಾಜ್ಯ ಸಚಿವ  ಸುರೇಶ ಅಂಗಡಿ, ಬಿಜೆಪಿ ಶಾಸಕರು, ಮಾಜಿ ಶಾಸಕರು ಮತ್ತು ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು  ಲೋಕಸಭಾ ಚುನಾವಣಾ ಪ್ರಭಾರಿ  ಮಹಾಂತೇಶ ಕವಟಗಿಮಠ ತಿಳಿಸಿದ್ದಾರೆ.

Related Articles

Back to top button