Belagavi NewsBelgaum NewsKannada NewsKarnataka NewsPolitics
*ಡಿ. 9 ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ: ಸ್ಥಳ ಪರಿಶೀಲಿಸಿದ ಮುಖಂಡರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಳೆಯಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಲಿದ್ದು, ಡಿಸೆಂಬರ್ 9 ರಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕ್ಕೊಳ್ಳಲಾಗಿದೆ.
ಸರ್ಕಾರದ ವಿರುದ್ಧ ರೈತರ ಸಮಸ್ಯೆಗಳು ಹಾಗೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಈಡೇರಿಸಬೇಕು ಎಂದು ಪ್ರತಿಭಟಿಸುವ ಮೂಲಕ ಬಿಜೆಪಿ ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಪ್ಲಾನ್ ಮಾಡಿಕೊಂಡಿದೆ.
ಹೀಗಾಗಿ ಪ್ರತಿಭಟನಾ ಸ್ಥಳಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ. ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್ ರವಿ ಕುಮಾರ್, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ, ಬೆಳಗಾವಿ ಗ್ರಾಮಾಂತರ ಅಧ್ಯಕ್ಷರಾದ ಸುಭಾಷ್ ಪಾಟೀಲ್ ಹಾಗೂ ಪಕ್ಷದ ಮುಖಂಡರಿಂದ ಭೇಟಿ ನೀಡಿ ಪ್ರತಿಭಟನಾ ಸ್ಥಳ ಪರಿಶೀಲನೆ ನಡೆಸಲಾಯಿತು.



