*ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ತೀವ್ರ ಹೋರಾಟ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ರಾಜ್ಯ ಬಿಜೆಪಿ ವರಿಷ್ಠ ಬಿ. ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಸದಸ್ಯರ ಸಭೆಯಲ್ಲಿ ಹೋರಾಟ ನಡೆಸುವ ಸಂಬಂಧ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ಜೋಶಿ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ, ದುರಾಡಳಿತದ ವಿರುದ್ಧ ಜನಜಾಗೃತಿಯನ್ನುಂಟು ಮಾಡಲೆಂದು ಹೋರಾಟಕ್ಕಿಳಿಯಲಾಗುತ್ತಿದೆ ಎಂದಿದ್ದಾರೆ.
ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ವಿಪರೀತ ಭ್ರಷ್ಟಾಚಾರದಲ್ಲಿ ತೊಡಗಿದೆ. ಇದರ ವಿರುದ್ಧ ಪ್ರತಿಪಕ್ಷ ಬಿಜೆಪಿ ಹೋರಾಟವನ್ನ ಮತ್ತಷ್ಟು ತೀವ್ರಗೊಳಿಸುವುದು ಅನಿವಾರ್ಯ ಎಂಬ ಅಭಿಪ್ರಾಯಕ್ಕೆ ಇಂದು ಸೇರಿದ ಸಭೆಯಲ್ಲಿ ಒಕ್ಕೊರಲ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಮಾಜಿ ಸಿಎಂ ಡಿವಿ ಸದಾನಂದ ಗೌಡ, ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣ ಸ್ವಾಮಿ, ಶಾಸಕ ಅಶ್ವಥ್ ನಾರಾಯಣ್ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಪ್ರಮುಖರು ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ