ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣದಲ್ಲಿ ಸಿಎಂ ಪಾತ್ರ ಇಲ್ಲ ಬಿಜೆಪಿಯವರು ಇದರಲ್ಲಿ ಮುಖಭಂಗ ಅನುಭವಿಸುತ್ತಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಡಾ ಸೈಟ್ ಹಂಚಿಕೆಯಾಗಿದ್ದು ಬಿಜೆಪಿ ಸರಕಾರದ ಅವಧಿಯಲ್ಲಿ. ಆಗ ಅವರು ಸರಿಯಾಗಿ ನೋಡಿಕೊಳ್ಳಬೇಕಿತ್ತು ಎಂದರು. ಛಲವಾದಿ ನಾರಾಯಣ ಸ್ವಾಮಿ ನನಗೆ ಆತ್ಮೀಯ ಸ್ನೇಹಿತರು. ಪ್ರಿಯಾಂಕಾ ಖರ್ಗೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಜೆಪಿಯವರು ಅವಮಾನ ಮಾಡುತ್ತಾರೆ. ಅದು ಅಪಮಾನ ಅಲ್ವಾ? ನಾನು ಶೆಡ್ ಗಿರಾಕಿ ಅಂದಿದ್ದು ಇದನ್ನು ಬಿಜೆಪಿಯವರು ರಾಜಕೀಯ ಮಾಡಲು ಹೊರಟಿರುವುದು ವಿಪರ್ಯಾಸ ಎಂದರು.
ಬಿಜೆಪಿಯವರ ಸಿದ್ಧಾಂತ ದಲಿತರಿಗೆ ಅಪಮಾನ ಮಾಡಿಸುವುದು. ನಾರಾಯಣ್ ಸ್ವಾಮಿಯನ್ನು ಮುಂದೆ ಕಟ್ಟಿಕೊಂಡು ಈಗ ದಲಿತ ಅಸ್ತ್ರ ಪ್ರಯೋಗ ಮಾಡುತ್ತಿದ್ದಾರೆ. ವಿಜಯೇಂದ್ರನ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ.
ಖರ್ಗೆ ಕುಟುಂಬಕ್ಕೆ ಭೂಮಿ ನೀಡಿರುವ ಪ್ರಯತ್ನ ಎಂಬ ಆರೋಪಕ್ಕೆ ನಿನ್ನೆ ಎರಡು ಗಂಟೆಗಳ ಕಾಲ ಸುದೀರ್ಘ ಉತ್ತರ ಕೊಟ್ಟಿದ್ದೇನೆ. ಬಿಜೆಪಿ ನಾಯಕರಿಗೆ ಸಿಎ ಸೈಟ್ ಅಂದರೆ ಏನು ಎಂಬುದು ಗೊತ್ತಿಲ್ಲ. ಖರ್ಗೆ ಮಗ ಕಂಪ್ಯೂಟರ್ ಸೈನ್ಸ್ ಇಂಜಿನಿಯರ್. ಆರು ಅರ್ಜಿ ನೋಡಿ ಮೆರಿಟ್ ಮೇಲೆ ಸೈಟ್ ಹಂಚಿಕೆ ಮಾಡಿದ್ದೇವೆ. 2021ರ ಬಿಜೆಪಿ ಸರಕಾರ ಅಲಾರ್ಟ್ ಮಾಡಿದೆ.
ಯಾವುದೇ ಸೈಟ್ ಕೊಡಬೇಕು ಎಂಬುದು 1991ರಲ್ಲಿ ನಿರ್ಣಯ ಆಗಿದೆ. ಚಲುವಾದಿ ನಾರಾಯಣಸ್ವಾಮಿ ನನ್ನ ಆತ್ಮೀಯ ಮಿತ್ರ. ಒಬ್ಬ ದಲಿತರನ್ನು ಉಪಯೋಗಿಸಿ ಎಐಸಿಸಿ ಅಧ್ಯಕ್ಷರಿಗೆ ಟಾರ್ಗೆಟ್ ಮಾಡಿದ್ದಾರೆ. ದಲಿತ ನಾಯಕ ಖರ್ಗೆಗೆ ಬಿಜೆಪಿ ಅಪಮಾನ ಮಾಡಿಲ್ವಾ. ನಾರಾಯಣಸ್ವಾಮಿ 2006ರಲ್ಲಿ ಭೂಮಿ ತಗೊದುಕೊಂಡಿದ್ದಾರೆ. ಯಾವುದೇ ಕೆಲಸ ಮಾಡಿಲ್ಲ.ಕೋರ್ಟ್ ಗೆ ಹೋಗಿ ಬದಲಾವಣೆ ಮಾಡಿಕೊಂಡು ಬಂದಿದ್ದಾರೆ. ಒಂದು ಶೆಡ್ ನಿರ್ಮಾಣ ಮಾಡಿ ಸಂಪೂರ್ಣ ಸೆಲ್ ಡಿಡ್ ಕೇಳಿದ್ದಾರೆ. ದಲಿತರನ್ನು ಉಪಯೋಗ ಮಾಡಿಕೊಂಡು ದಲಿತರನ್ನು ಅಪಮಾನ ಮಾಡುವುದು ಬಿಜೆಪಿ ಸಂಚು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಯಡಿಯೂರಪ್ಪ ಲಿಂಗಾಯತ ವಿರುದ್ಧ ಲಿಂಗಾಯತ ಮಾಡಿದರು. ವಿಜಯೇಂದ್ರನ ಗಾಡಿ ಬಹಳ ದಿನ ಹೋಗಲ್ಲ
ವಿಜಯೇಂದ್ರನನ್ನು ಯಾರು ಸಹ ಬಿಜೆಪಿಯವರು ಒಪ್ಪಲ್ಲ. ಬಿಜೆಪಿ ಹಾಗೂ ಆರ್ ಎಸ್ ಎಸ್ ನವರು ಇದೇ ನಿತಿಯಾಗಿದೆ. ಶೆಡ್ ಗಿರಾಕಿ ಎಂದು ಅಪಮಾನ ಆಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.
ಬೆಳಗಾವಿ ಹಾಗೂ ಹುಬ್ಬಳ್ಳಿ ಮದ್ಯದಲ್ಲಿ ನೂರು ಎಕರೆ ಪ್ರದೇಶದಲ್ಲಿ ಸ್ಟಾರ್ಟ್ ಅಪ್ ಪಾರ್ಕ್ ಮಾಡುತ್ತೇವೆ. ಬೆಳಗಾವಿ ಗೋವಾ ಹೈವೆ ಮೇಲೆ ಫೌಂಡ್ರಿ ಪಾರ್ಕ್ ಮಾಡುತ್ತೇವೆ ಎಂದ ಅವರು, ಕಿತ್ತೂರು ಬಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕಿತ್ತು. ಬೆಳಗಾವಿ, ಹುಬ್ಬಳ್ಳಿ ವಿಮಾನ ನಿಲ್ದಾಣ ಮೇಲ್ದರ್ಜೆಗೆ ಏರಿದ್ದರಿಂದ ಇದು ಸಾಧ್ಯವಾಗಿಲ್ಲ.
ಬೆಳಗಾವಿ- ಹುಬ್ಬಳ್ಳಿ ನಡುವೆ ಇಂಡಸ್ಟ್ರೀಯಲ್ ಕಾರಿಡಾರ್ ಮಾಡಲು ಪ್ರಯತ್ನ ಮಾಡುವೆ. ಹುಬ್ಬಳ್ಳಿ ಹಾಗೂ ಬೆಳಗಾವಿ ನೇರ ರೈಲು ಮಾರ್ಗ ವಿಚಾರ.
ಅಲೈನ್ ಮೆಂಟ್ ಸಮಸ್ಯೆ ಇವೆ. ನಾಲ್ಕೈದು ದಿನಗಳ ಹಿಂದೆ ಸಭೆ ಮಾಡಿದ್ದೇನೆ.ಸೂಕ್ತ ತಾಂತ್ರಿಕ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಈ ಯೋಜನೆ ಜಾರಿಯಾದರೆ ಬೆಳಗಾವಿ ಹಾಗೂ ಬೆಂಗಳೂರಿನ ರೈಲು ಪ್ರಯಾಣದ ಅಂತರ ಐದು ಗಂಟೆ ಕಡಿಮೆಯಾಲಿದೆ. ಸಂಬಂಧಿಸಿದ ಹಾಗೂ ಶಾಸಕರು, ಸಚಿವರ ಜೊತೆಗೆ ಮಾತನಾಡಿದ್ದೇನೆ. ಅಲೈನ್ ಮೆಂಟ್ ಬದಲಾವಣೆ ರೈಲು ಇಲಾಖೆ ಒಪ್ಪಲ್ಲ ಎಂದರು.
ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ರಾಜಾ ಸಲೀಂ, ರಾಜೇಂದ್ರ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ