Latest

ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಗ್ರೆನೇಡ್ ದಾಳಿ; ಪುಟ್ಟ ಬಾಲಕ ಸಾವು

ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಬಿಜೆಪಿ ಕಾರ್ಯಕರ್ತನ ನಿವಾಸದ ಮೇಲೆ ಗ್ರೆನೇಡ್ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ರಜೌರಿಯಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತ ಜಸ್ ಬಿರ್ ಸಿಂಗ್ ಮನೆ ಮೇಲೆ ಈ ದಾಳಿ ನಡೆದಿದ್ದು, ಮೆಲ್ನೋಟಕ್ಕೆ ಗ್ರೆನೇಡ್ ದಾಳಿ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಪುಟ್ಟ ಬಾಲಕ ಸಾವನ್ನಪ್ಪಿದ್ದು, ಕುಟುಂಬದ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರಜೌರಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ದಾಳಿ ಹೊಣೆಯನ್ನು ಲಷ್ಕರ್ ಉಗ್ರ ಸಂಘಟನೆ ಹೊತ್ತುಕೊಂಡಿದೆ ಎಂದು ವರದಿಯಾಗಿದೆ. ಪ್ರಕರಣ ದಾಖಲಿಸಿಕೊಮ್ದಿರುವ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ಗಾಣಿಗ ಸಮಾಜಕ್ಕೆ ಸಿಎಂ ಬೊಮ್ಮಾಯಿ ಅನ್ಯಾಯ

Home add -Advt

Related Articles

Back to top button