
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಹಾಗೂ ಸಚಿವ ಶರಣ ಪ್ರಕಾಶ್ ಪಾಟೀಲ್ ವಿರುದ್ಧ ಕಿರುಕುಳ ಆರೋಪ ಮಾಡಿ ಆಡಿಯೋ ರೆಕಾರ್ಡ್ ಮಾಡಿಟ್ಟು ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದ.
ಇದೀಗ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆಯನ್ನು ರೈತನ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ. ಸ್ವತಃ ಶಿವಕುಮಾರ್ ಪತ್ನಿ ಮಲ್ಲಮ್ಮ ರೈತ ಆತ್ಮಹತ್ಯೆ ಎಂದು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಪತಿ 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಮಳೆಯಿಲ್ಲದೇ ಹೆಸರು ಬೆಳೆ ಹಾಳಾಗಿತ್ತು. ಸಾಲ ತೀರಿಸಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಲ್ಲಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ