
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವಿಚಾರವಾಗಿ ಬಿಜೆಪಿ ಕಾರ್ಯಕರ್ತ ಅವಿನಾಶ್ ಗೌಡ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರಿನ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವಿನಾಶ್ ಗೌಡ ಅವರನ್ನು ಬಂಧಿಸಲಾಗಿದೆ. ಬಳಿಕ ವಿಚರಣೆ ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಅವಿನಾಶ್ ಗೌಡ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ವಿರುದ್ಧ ಹಾಗೂ ಅನ್ನಭಾಗ್ಯ ಯೋಜನೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದನು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅವಿನಾಶ್ ಗೌಡ ವಿರುದ್ಧ ದೂರು ದಾಖಲಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ