
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಚುನಾವಣೆ ವೇಳೆ ಮತಗಟ್ಟೆ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ.
ರಾಮು ರಾಥೋಡ್ (45) ಮೃತ ಬಿಜೆಪಿ ಕಾರ್ಯಕರ್ತ. ನೇಣು ಬಿಗಿದ ಸ್ಥಿತಿಯಲ್ಲಿ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ ರಾಮು ರಾಠೋಡ್ ಶವ ಪತ್ತೆಯಾಗಿದೆ.
ನಿನ್ನೆ ಪೋಲಿಂಗ್ ಬೂತ್ ಏಜೆಂಟ್ ಆಗಿ ಕೆಲಸ ಮಾಡಿದ್ದ ರಾಮು ರಾಥೋಡ್ ಇಂದು ಸಲಗರ ಬಸಂತಪುರ ತಾಂಡಾ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊಲೆ ಮಾಡಿ ರಾಮುನನು ನೇಣು ಬಿಗಿದಿದ್ದಾಗಿ ಕುಟುಂಬದವರು ಆರೋಪಿಸಿದ್ದಾರೆ.
ಸ್ಥಳಕ್ಕೆ ಧಾವಿಸಿರುವ ಚಿಂಚೋಳಿ ಪೊಲಿಸರು ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ