Belagavi NewsBelgaum NewsKarnataka NewsPolitics

*ಬೆಲೆ ಏರಿಕೆ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದ್ದು, ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ‌.

ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಗ್ರಾಮೀಣ ಹಾಗೂ ಉತ್ತರ ಬಿಜೆಪಿ ಮಂಡಲದಿಂದ ಪ್ರತಿಭಟನೆ ನಡೆಸಲಾಯಿತು. ಬಳಿಕ ಪ್ರತಿಭಟನೆ ಮುಖಾಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗೆ ಹಣ ಜೋಡಿಸಲು ದರ ಹೆಚ್ಚಳ ಮಾಡಿದೆ. ರಾಜ್ಯದಲ್ಲಿ ಪೆಟ್ರೋಲ್ ಡಿಸೇಲ್ ದರ ಹೆಚ್ಚಳ ಮಾಡಿ ಜನರ ಮೇಲೆ ಹೊರೆ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿನ ಬಡವರು ಹಾಗೂ ದಲಿತರ ಹಣ ನುಂಗಿದೆ. ರಾಜ್ಯ ಆರ್ಥಿಕವಾಗಿ ದಿವಾಳಿ ಹಂತಕ್ಕೆ ಹೋಗಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಘೋಷಣೆ ಹಾಕಿ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button