Belagavi NewsBelgaum NewsKannada NewsKarnataka NewsPolitics

*ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು. 

Home add -Advt

ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರನ್ನು ಹಾಗೂ ಪಕ್ಷದ ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರನ್ನು ಬಂಧಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.‌ 

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಾಜಿ ಶಾಸಕ ಸಂಜಯ್ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ದೇಶಪಾಂಡೆ, ಈರಯ್ಯ ಖೋತ್, ಮುರಗೇಂದ್ರಗೌಡ ಪಾಟೀಲ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಸಂತೋಷ ದೇಶನೂರ, ವಿಜಯ ಕೊಡಗಾನೂರ, ಸಿದ್ದು ಪಾಟೀಲ, ಪ್ರಸಾದ ದೇವರಮನಿ, ವಿಠ್ಠಲ ಸಾಯಣ್ಣವರ, ಸಂಜಯಕುಮಾರ ನವಲಗುಂದ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button