Belagavi NewsBelgaum NewsKannada NewsKarnataka NewsPolitics

*ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಿಜೆಪಿ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಹಲ್ಲೆ ನಡೆಸಿದ ಘಟನೆ ಖಂಡಿಸಿ ಇಂದು ಬಿಜೆಪಿ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.‌

ಪ್ರತಿಭಟನೆಯ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಬಳಿಕ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ, ನೂಕಾಟ, ತಳ್ಳಾಟ ಉಂಟಾಗಿ ಕೆಲ ಕ್ಷಣ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Home add -Advt

ದೇಶ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸಿ ವಿದ್ಯಾರ್ಥಿಗಳನ್ನು ರಾಜಕೀಯ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಪಕ್ಷ ಬಳಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು. ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಮುಂದೆ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯನ್ನು ಖಂಡಿಸಿ  ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು‌.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಶಾಸಕ ವಿಠ್ಠಲ ಹಲಗೇಕರ, ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ಕವಟಗಿಮಠ, ಬಿಜೆಪಿ ಮಹಾನಗರ ಅಧ್ಯಕ್ಷರಾದ ಗೀತಾ ಸುತಾರ, ಮಾಜಿ ಶಾಸಕರಾದ ಅನಿಲ ಬೆನಕೆ, ಮಹಾಂತೇಶ ದೊಡ್ಡಗೌಡ್ರ, ವಿಶ್ವನಾಥ ಪಾಟೀಲ, ಅರವಿಂದ ಪಾಟೀಲ, ಡಾ.ಸೋನಾಲಿ ಸರ್ನೋಬತ್ ಹಾಗೂ ಪ್ರಮುಖ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರಿದ್ದರು.

Related Articles

Back to top button