Kannada NewsKarnataka NewsLatest

*ಆಡಿಯೋ ರೆಕಾರ್ಡ್ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಸಚಿವರ ವಿರುದ್ಧವೇ ಗಂಭೀರ ಆರೋಪ ಮಾಡಿ ಬಿಜೆಪಿ ಕಾರ್ಯಕರ್ತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತ ಶಿವಕುಮಾರ್ (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ಶಿವಕುಮಾರ್ ಆತ್ಮಹತ್ಯೆ ಮಡಿಕೊಂಡಿದ್ದಾರೆ.

Home add -Advt

ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಆತ್ಮಹತ್ಯೆಗೂ ಮುನ್ನ ಮೂರು ಆಡಿಯೋ ರೆಕಾರ್ಡ್ ಮಾಡಿರುವ ಕಾರ್ಯಕರ್ತ, ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದಷ್ಟೇ ಹೊರಬರಬೇಕಿದೆ.

Related Articles

Back to top button