Karnataka NewsPolitics

*ಫೇಸ್ ಬುಕ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ*

ಪ್ರಗತಿವಾಹಿನಿ ಸುದ್ದಿ: ಫೇಸ್ ಬುಕ್ ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಪಟ್ಟ ನಡೆದಿದೆ.

ಪ್ರವೀಣ್ ಗೌಡ ಬೇಲೂರು (35) ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ಫೇಸ್ ಬುಕ್ ವಿಡಿಯೋದಲ್ಲಿ ಹಲವರ ವಿರುದ್ಧ ಆರೋಪ ಮಾಡಿ, ಹೆಸರನ್ನು ಉಲ್ಲೇಖಿಸಿ ರೆಕಾರ್ಡ್ ಮಾಡಿಟ್ಟು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Home add -Advt

ತನಗೆ ಹಲವರು ಕಿರುಕುಳ ನೀಡುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಸಾವಿಗೆ ಹಲವರು ನೇರ ಕಾರಣ ಎಂದು ಹೇಳಿದ್ದಾರೆ.

ಸಮಂದೂರು ಕಿರಣ, ಗೋಕುಲ್ ಫ್ಯಾಷನ್ ಹರೀಶ್, ಭಾಸ್ಕರ್ ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ, ಸರವಣ, ಬಿಜೆಪಿ ಮಂಡಲ ಅಧ್ಯಕ್ಷ ಮುನಿರಾಜು ಸೇರಿದಂತೆ ಹಲವರ ಹೆಸರನ್ನು ಉಲ್ಲೇಖಿಸಿ ಸಾವನ್ನಪ್ಪಿದ್ದಾರೆ.

ಯಾರನ್ನು ಬಿಟ್ಟರೂ ಕಿರಣ್ ನನ್ನು ದಯವಿಟ್ಟು ಬಿಡಬೇಡಿ. ಕಿರಣ್ ಹಲವು ಹೆಣ್ಣುಮಕ್ಕಳಿಗೆ ಫೋನ್ ಮಾಡಿ ಟಾರ್ಚರ್ ಕೊಡುತ್ತಿದ್ದಾನೆ. ಕಿರಣ್ ಮಾಡುವ ಇಂತಹ ಕೆಲಸಗಳೆಲ್ಲ ನನ್ನ ಮೇಲೆ ಬಂದಿವೆ ಎಂದು ವಿಡಿಯೋ ರೆಕಾರ್ಡ್ ನಲ್ಲಿ ಹೇಳಿದ್ದಾರೆ. ನನ್ನ ಮೇಲೆ ಹಲ್ಲೆಯನ್ನೂ ನಡೆಸಲಾಗಿದೆ. ನಾನು ಸತ್ತ ಮೇಲೆ ನನ್ನ ದೇಹದ ಮೇಲಿನ ಗಾಯಗಳನ್ನು ಪೊಲೀಸರು ಗುರುತಿಸಬೇಕು. ಹಲವಾರು ಅಂಶಗಳ ಬಗ್ಗೆಯೂ ಪ್ರಸ್ತಾಪಿಸಿ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Related Articles

Back to top button