Kannada NewsKarnataka NewsLatestPolitics

BREAKING: ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರು ಅಮಾನತು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆಯಲ್ಲಿ ಡೆಪ್ಯೂಟಿ ಸ್ಪೀಕರ್ ಮೇಲೆ ವಿಧೇಯಕ ಹರಿದು ತೂರಾಡಿದ್ದ ಬಿಜೆಪಿ ಸದಸ್ಯರನ್ನು ಅಧಿವೇಶನಿಂದ ಅಮಾನತು ಮಾಡಿರುವ ಘಟನೆ ನಡೆದಿದೆ.

ವಿಧಾನಸಭೆಯ ಕಲಾಪಕ್ಕೆ ಅಡ್ಡಿಪಡಿಸಿ ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಬಿಜೆಪಿಯ 10 ಶಾಸಕರನ್ನು ವಿಧನಸಭೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ಸದಸ್ಯರಾದ ಆರ್.ಅಶೋಕ್, ಡಾ.ಅಶ್ವತ್ಥನಾರಾಯಣ, ಸುನೀಲ್ ಕುಮಾರ್, ಅರವಿಂದ್ ಬೆಲ್ಲದ್, ವೇದವ್ಯಾಸ್ ಕಾಮತ್, ಧೀರಜ್ ಮುನಿರಾಜು, ಯಶ್ ಪಾಲ್ ಸುವರ್ಣ, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ, ಭರತ್ ಶೆಟ್ಟಿ ಸೇರಿದಂತೆ 10 ಸದಸ್ಯರು ಅಧಿವೇಶನ ಮುಗಿಯವರೆಗೆ ಸದನದಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button