Kannada NewsKarnataka NewsLatest
*ನಮ್ಮ ಶಾಸಕರಿಗೆ 50 ಕೋಟಿ ಆಫರ್ ಕೊಡುತ್ತಿದ್ದಾರೆ; ಕಾಂಗ್ರೆಸ್ ಶಾಸಕನಿಂದ ಸ್ಫೋಟಕ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ನಮ್ಮ ಶಾಸಕರನ್ನು ಸೆಳೆಯಲಿ ಬಿಜೆಪಿ ಆಮಿಷವೊಡ್ಡುತ್ತಿದೆ ಎಂದು ಮಂಡ್ಯ ಕಾಂಗ್ರೆಸ್ ಶಾಸಕ ರವಿ ಗಣಿಗ ಪುನರುಚ್ಛರಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರವಿ ಗಣಿಗ, ನಿನ್ನೆ ಹೇಳಿದ್ದನ್ನೇ ಮತ್ತೆ ರಿಪೀತ್ ಮಾಡಲು ಇಷ್ಟವಿಲ್ಲ. ನಮ್ಮ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಇದೆ ಎಂದರು.
ಡಿಸಿಎಂ ಸಹ ಈ ಬಗ್ಗೆ ಮಾತನಾಡಿದ್ದಾರೆ. ದೊಡ್ಡ ದೊಡ್ಡ ನಾಯಕರನ್ನು ಸೆಳೆಯಲು ಯತ್ನ ನಡೆದಿದೆ. ನನ್ನ ಬಳಿ ಇರುವ ಮಾಹಿತಿಯನ್ನು ಸಿಎಂ ಹಾಗೂ ಡಿಸಿಎಂ ಗೆ ಹೇಳುತ್ತೇನೆ ಎಂದು ಹೇಳಿದರು.
ನಮ್ಮ ಶಾಸಕರಿಗೆ 50 ಕೋಟಿ ಆಫರ್ ಕೊಟ್ಟಿದ್ದಾರೆ. ಬಿಜೆಪಿಗೆ ಬಂದರೆ ಮಂತ್ರಿಗಿರಿ ಕೊಡುವುದಾಗಿಯೂ ಆಮಿಷವೊಡ್ಡುತ್ತಿದ್ದಾರೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ