Latest

*8 ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ರಾಯಚೂರು: ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ 8 ಬಿಜೆಪಿ ಕಾರ್ಯಕರ್ತರ ವಿರುದ್ಧ ರಾಯಚೂರಿನ ದೇವದುರ್ಗ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಜೂನ್ 4ರಂದು ಅರಕೇರಾ ತಾಲೂಕಿನ ಆಲದಮರ ತಾಂಡಾದಲ್ಲಿ ವಿದ್ಯುತ್ ತಂತಿ ತಗುಲಿ ಲೈನ್ ಮ್ಯಾನ್ ವಿರೂಪಾಕ್ಷಪ್ಪ ಸಾವನ್ನಪ್ಪಿದ್ದರು. ಶಾಸಕಿ ಕರಿಯಮ್ಮ ನಾಯಕ್ ಘಟನಾ ಸ್ಥಳಕ್ಕೆ ತಡವಾಗಿ ಆಗಮಿಸಿದ್ದರು. ಈ ವೇಳೆ ಶಾಸಕಿ ಕರಿಯಮ್ಮ ನಾಯಕ್ ಅವರನ್ನು ಬಿಜೆಪಿ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ದೇವದುರ್ಗ ಠಾಣೆಯಲ್ಲಿ ಶಾಸಕಿ ಕರಿಯಮ್ಮ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ 8 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

 

Home add -Advt

https://pragati.taskdun.com/gruhajyoti-yojaneguidlinerealese/

Related Articles

Back to top button