Latest

*ಚುನಾವಣೆ ಹೊತ್ತಲ್ಲೇ BJPಗೆ ಬಿಗ್ ಶಾಕ್; ಮತ್ತೊಂದು ವಿಕೆಟ್ ಪತನ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬಿಸಿ ಆರಂಭವಾಗಿದ್ದು, ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ. ವಿಧಾನಪರಿಷತ್ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಆಯನೂರು ಮಂಜುನಾಥ್, ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಕಾಂಕ್ಷಿಯಾಗಿದ್ದೆ. ಆದರೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಕ್ಕಳಿಗೆ ಟಿಕೆಟ್ ನಿಡುವ ಮಾತುಗಳು ಕೇಳಿಬರುತ್ತಿವೆ. ಇದರಿಂದ ಬೇಸರವಾಗಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದಾರೆ.

Home add -Advt

ನನ್ನ ಆಸೆಗೆ ಪೂರಕವಾಗಿ ಬಿಜೆಪಿ ತಿಕೆಟ್ ನೀಡುವ ಲಕ್ಷಣಗಳು ಕಂಡುಬರುತ್ತಿಲ್ಲ, ಬದಲಾಗಿ ಈಶ್ವರಪ್ಪ, ಅವರ ಮಕ್ಕಳ ಹೆಸರು ಕೇಳಿಬರುತ್ತಿದೆ. ಈಶ್ವರಪ್ಪ ಆಡಿದ ಮಾತುಗಳು ನನಗೆ ಇಷ್ಟವಾಗಿಲ್ಲ. ಸುದ್ದಿಗೋಷ್ಠಿಯಲ್ಲಿ ನನ್ನ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಮಾತನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ. ಕೆ.ಎಸ್.ಈಶ್ವರಪ್ಪ ಸಮರ್ಥರಿದ್ದರೆ ನನ್ನನ್ನು ಎದುರಿಸಲಿ ಎಂದು ಬಹಿರಂಗವಾಗಿ ಸವಾಲು ಹಾಕಿದ್ದಾರೆ.

https://pragati.taskdun.com/shashibhushan-hegde-joins-bjp/

Related Articles

Back to top button