ನಕಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ನನಗೆ ಗೌರವವಿಲ್ಲ ಎಂದ ಯತ್ನಾಳ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ನಾಯಕರು ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಆದರೆ ಅದಕ್ಕೆ ಸಂವಿಧಾನದಲ್ಲಿ ಯಾವುದೇ ಅವಕಾಶವಿಲ್ಲ, ನಾನು ರಾಜೀನಾಮೆ ನೀಡುವ ಪ್ರಶ್ನೆಯೂ ಇಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸ್ವಾತಂತ್ರ್ಯ ಹೋರಾಟಾಗಾರರ ಮೇಲೆ ಗೌರವವಿದೆ. ಆದರೆ ನಕಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಗೌರವವಿಲ್ಲ. ದೊರೆಸ್ವಾಮಿ ಪಾಕ್ ಏಜೆಂಟ್ ಎಂಬ ಹೇಳಿಕೆ ಬಗ್ಗೆ ನಾನು ಕ್ಷಮೆ ಕೇಳಲ್ಲ. ಕಾಂಗ್ರೆಸ್ ನಾಯಕರು ಎಷ್ಟೇ ಒತ್ತಡ ಹೇರಿದರೂ ನನ್ನ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ನಾವು ದೇಶದ ಬಗ್ಗೆ, ಹಿಂದೂತ್ವದ ಬಗ್ಗೆ ಮಾತನಾಡಿದರೆ ಕಾಂಗ್ರೆಸ್ಸಿಗರಿಗೆ ನಾವೆಲ್ಲ ಅಪರಾಧಿಗಳು. ನಕ್ಸಲ್ ವಾದ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕಾಣುವುದಿಲ್ಲ. ದೇಶ ವಿರೋಧಿಗಳಿಗೆ ಬೆಂಬಲ ನೀಡುವ ಕೆಲಸವನ್ನು ಸಿದ್ದರಾಮಯ್ಯ ಬಿಡಬೇಕು ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನವರು ದೇಶ ವಿರೋಧಿಗಳಿಗೆ ಬೆಂಬಲ ನೀಡುತ್ತಿದ್ದಾರೆ. ಅವರಿಗೆ ಉದ್ಯೋಗವಿಲ್ಲ. ಕಾಂಗ್ರೆಸ್ ನಾಯಕರು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀದುವಂತೆ ಹೇಳುತ್ತಿದ್ದಾರೆ. ಆದರೆ ನನ್ನ ಪದಚ್ಯುತಗೊಳಿಸಲು ಸಂವಿಧಾನದಲ್ಲಿ ಅವಕಾಶ ಇಲ್ಲ. ಹಾಗೆ ಮಾಡುವುದಾದರೆ ಮೊದಲು ಕಾಂಗ್ರೆಸ್​ನವರು ಸಾವಿರ್ಕರ್ ಬಗ್ಗೆ ಮಾತಾಡಿದ ರಾಹುಲ್ ಗಾಂಧಿ, ಮಣಿಶಂಕರ್ ಐಯ್ಯರ್ ಅವರನ್ನು ಪದಚ್ಚುತಗೊಳಿಸಬೇಕು. ಇವರೆಲ್ಲರೂ ತುಕಡೆ ಗ್ಯಾಂಗ್ ಗೆ ಸೇರಿದವರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button