
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಬಿಜೆಪಿ ಪರ ಪ್ರಚಾರ ಮಾಡಿದ ಆರೋಪದಡಿ ಸರ್ಕಾರಿ ನೌಕರನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಅಯ್ಯಣ್ಣ ಮರದೂರು ಎಂಬ ಸರ್ಕಾರಿ ನೌಕರರನ್ನು ಅಮಾನತು ಮಾಡಿ ಕಲಬುರ್ಗಿ ವಿಭಾಗದ ಶಿಕ್ಷಣ ಇಲಾಖೆ ಆಯುಕ್ತರಾದ ಆನಂದ್ ಪ್ರಕಾಶ್ ಮೀನಾ ಆದೇಶ ಹೊರಡಿಸಿದ್ದಾರೆ.
ಶಿಕ್ಷಣ ಇಲಾಖೆ ಪ್ರಥಮ ದರ್ಜೆ ಸಹಾಯಕರಾಗಿದ್ದ ಅಯ್ಯಣ್ಣ ಮರದೂರು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ