ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕೊನೆ ಹಂತದಲ್ಲಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.
ಈಗಾಗಲೇ ಘೋಷಣೆಯಾಗಿದ್ದ 8 ಅಭ್ಯರ್ಥಿಗಳಲ್ಲಿ 4 ಅಭ್ಯರ್ಥಿಗಳನ್ನು ಬದಲಾವಣೆ ಮಾಡಲಾಗಿದೆ, ಮಾರ್ಚ್ 28ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ 8 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ್ದರು. ಆದರೆ ನಾಲ್ಕೇ ದಿನಗಳಲ್ಲಿ ನಾಲ್ಕು ಅಭ್ಯರ್ಥಿಗಳ ಹೆಸರು ಬದಲಾವಣೆ ಮಾಡಲಾಗಿದೆ. ಇದು ಟಿಕೆಟ್ ಆಕಾಂಕ್ಷಿಗಳಿಗೆ ಶಾಕ್ ನೀಡಿದೆ.
ಸರ್ವೆ ಆಧಾರದ ಹಿನ್ನೆಲೆಯಲ್ಲಿ ನಾಲ್ಕು ಅಭ್ಯರ್ಥಿಗಳನ್ನು ಬದಲಿಸಲಾಗಿದೆ. ಅಲ್ಲದೇ 6 ಹಾಲಿ ಸಂಸದರಿಗೆ ಟಿಕೆಟ್ ನೀಡದೇ ಇರಲು ತೀರ್ಮಾನಿಸಲಾಗಿದೆ. ಮಹಾ ಸಿಎಂ ಏಕನಾಥ್ ಶಿಂಧೆ ಈ ನಿರ್ಧಾರಕ್ಕೆ ಬಿಜೆಪಿ ಟಿಕೆಟ್ ವಂಚಿತರು ಗರಂ ಆಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ