*ಬಿಜೆಪಿ ಜೊತೆ ಕಾಂಗ್ರೆಸ್ ಮೈತ್ರಿ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಧಿಕಾರ ಇರಲಿ, ಇಲ್ಲದಿರಲಿ ಯಾವುದೇ ಕಾರಣಕ್ಕೂ ಬಿಜೆಪಿ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಜೊತೆ ಸರ್ಕಾರ ಮಾಡಿದರೆ ನನ್ನ ಹೆಣದ ಮೇಲೆ ಮಾಡಬೇಕು ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಈಗ ಜನತಾದಳ ಉಳಿವಿಗಾಗಿ ಬಿಜೆಪಿ ಜೊತೆ ಸೇರುತ್ತಿದ್ದೇವೆ ಎಂದು ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಜಾತ್ಯತೀತ ಜನತಾದಳದ ಸಂಸ್ಥಾಪಕ ಸದಸ್ಯ ನಾನು. ಬದುಕಿರುವವರೆಗೂ ಬಿಜೆಪಿ ಜತೆ ಸೇರುವುದಿಲ್ಲ ಎಂದು ದೇವೇಗೌಡರು ಹೇಳಿದ್ದರು. ಈಗ ಇದೇ ದೇವೇಗೌಡರು ಬಿಜೆಪಿ ಜತೆ ಕೈಜೋಡಿಸುತ್ತಿದ್ದಾರೆ. ಎಲ್ಲಿ ಹೋಯಿತು ಜಾತ್ಯತೀತ ಮೌಲ್ಯ? ಎಂದು ಪ್ರಶ್ನಿಸಿದರು.
ಅಧಿಕಾರ ಇರಲಿ, ಇಲ್ಲದಿರಲಿ ಯವ ಕರಣಕ್ಕೂ ನಾನು ಬಿಜೆಪಿಗೆ ಹೋಗಲ್ಲ. ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ. ಒಂದು ಧರ್ಮದ ಮೇಲೆ ಇನ್ನೊಂದು ಧರ್ಮವನ್ನು ಎತ್ತಿಕಟ್ಟೋದು ರಾಜಕಾರಣನಾ? ಎಂದು ಪ್ರಶ್ನಿಸಿದರು.
ಜನರನ್ನು ಬಿಟ್ಟು, ಸಮಾಜವನ್ನು ಬಿಟ್ಟು ರಾಜಕಾರಣ ಮಾಡಲು ಆಗಲ್ಲ. ಜಾತ್ಯಾತೀತ ಪಕ್ಷ ಅಂತ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ