ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉದ್ಯೋಗ ಕೇಳಿದ ಯುವತಿಯನ್ನು ದುರುಪಯೋಗಪಡಿಸಿಕೊಂಡ ಸಚಿವರಿಂದ ಇಡೀ ರಾಜ್ಯಕ್ಕೆ ಕೆಟ್ಟ ಹೆಸರು. ರಕ್ಷಣೆ ಕೇಳಿದ ಆ ಯುವತಿಗಾದರೂ ರಕ್ಷಣೆ ಒದಗಿಸುವಿರಾ ಅಥವಾ ನಿಮ್ಮ ಮಹಿಳಾ ವಿರೋಧಿ ನಡೆ ಮುಂದುವರೆಸುವಿರಾ?ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಗೆ ತಿರುಗೇಟು ನೀಡಿರುವ ಬಿಜೆಪಿ ಘಟನೆಯ ಹಿಂದೆ ಜಾಮೀನಿನ ಮೇಲೆ ಹೊರಗೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡವಿದೆ ಎಂದು ಹೇಳಿದೆ.
ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ. ಆ ಮಹಾನಾಯಕ ಕೂಡಾ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ ಎಂದು ಹೇಳಿದೆ.
ರಾಹುಲ್ ಗಾಂಧಿ ಏಕೆ ಸುಕನ್ಯಾ ದೇವಿಯ ಪರವಾಗಿ ಒಮ್ಮೆಯೂ ಧ್ವನಿ ಎತ್ತಿಲ್ಲ? ಎಂದು ಪ್ರಶ್ನಿಸಿದೆ.
ಇದಕ್ಕೂ ಮೊದಲು ಟ್ವೀಟ್ ಮಾಡಿದ್ದ ಕಾಂಗ್ರೆಸ್, ಉದ್ಯೋಗ ಕೇಳಿದ ಯುವತಿಯನ್ನು ದುರುಪಯೋಗಪಡಿಸಿಕೊಂಡ ಸಚಿವರಿಂದ ಇಡೀ ರಾಜ್ಯಕ್ಕೆ ಕೆಟ್ಟ ಹೆಸರು. ರಕ್ಷಣೆ ಕೇಳಿದ ಆ ಯುವತಿಗಾದರೂ ರಕ್ಷಣೆ ಒದಗಿಸುವಿರಾ ಅಥವಾ ನಿಮ್ಮ ಮಹಿಳಾ ವಿರೋಧಿ ನಡೆ ಮುಂದುವರೆಸುವಿರಾ? ಎಂದು ಪ್ರಶ್ನಿಸಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ