Latest

ಯಡಿಯೂರಪ್ಪ ನಾಯಕತ್ವ ಮತ್ತಷ್ಟು ಗಟ್ಟಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನಸೃಷ್ಟಿಸಿದ್ದ ನಾಯಕತ್ವ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ನಾಯಕತ್ವ ಮತ್ತಷ್ಟು ಗಟ್ಟಿಯಾಗಿದೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ಎಲ್ಲಾ ಗೊಂದಲಗಳಿಗೂ ತೆರೆ ಎಳೆಯಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲೇ ಸರ್ಕಾರ ಮುಂದುವರೆಯಲಿದೆ. ಯಡಿಯೂರಪ್ಪನವರೇ ನಮ್ಮ ನಾಯಕರು. ಈ ಬಗ್ಗೆ ಸ್ಪಷ್ಟಪಡಿಸುವಂತೆ ಸ್ವತ: ಅರುಣ್ ಸಿಂಗ್ ಅವರೇ ಹೇಳಿದ್ದಾರೆ ಎಂದು ತಿಳಿಸಿದರು.

ಕೋರ್ ಕಮಿಟಿ ಸಭೆಯಲ್ಲಿ ಸಂಪುಟ ಪುನಾರಚನೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ, ಸರ್ಕಾರ, ಪಕ್ಷದ ಇಮೇಜ್ ಹೆಚ್ಚಿಸುವ ಬಗ್ಗೆ ತೀರ್ಮಾನಿಸಲಾಗಿದೆ. ಇನ್ಮುಂದೆ ನಾಯಕತ್ವದ ಬಗ್ಗೆಯಾಗಲಿ, ಯಡಿಯೂರಪ್ಪನವರ ವಿರುದ್ಧವಾಗಲಿ ಅಥವಾ ಸರ್ಕಾರ, ಪಕ್ಷದ ವಿರುದ್ಧ ಮಾತನಾಡುವ ಯಾರೇ ಆಗಲಿ ಅವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಒಟ್ಟಾರೆ ಸಿಎಂ ಬಿಎಸ್ ವೈ ವಿರೋಧಿ ಬಣದ ರಣತಂತ್ರ ವಿಫಲವಾಗಿದ್ದು, ಕೋರ್ ಕಮಿಟಿ ಸಭೆಯಲ್ಲಿ ವಿರೋಧಿ ಬಣಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ.
ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಹಣ ಪಡೆದಿದ್ದು ಸಿದ್ದರಾಮಯ್ಯ ಹೊರತು ನಾವಲ್ಲ -ಹೆಚ್ ಡಿಕೆ ಬಾಂಬ್

Home add -Advt

Related Articles

Back to top button