ಯಡಿಯೂರಪ್ಪ ನಂತರ ಬಿಜೆಪಿಯಲ್ಲಿ ದಲಿತ ಸಿಎಂ: ಶಾಸಕ ರಾಜೂಗೌಡ

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಬಿ.ಎಸ್ ಯಡಿಯೂರಪ್ಪ ನಂತರ ಬಿಜೆಪಿಯಲ್ಲಿ ದಲಿತ ಸಿಎಂ ಆಗಲಿದ್ದಾರೆ. ಬಿಜೆಪಿಯಲ್ಲಿ ದಲಿತರಿಗೆ ಸೂಕ್ತ ಸ್ಥಾನಮಾನ ಸಿಗಲಿದ್ದು, ಬೇರೆ ಪಕ್ಷಗಳಲ್ಲಿ ಅದು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಶಾಸಕ ರಾಜೂಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತರು ಸಿಎಂ ಆಗಬೇಕಾದರೆ ಅದು ಬಿಜೆಪಿಯಿಂದಲೇ ಸಾಧ್ಯ. ಈಗ ನಾವೆಲ್ಲ ಸಿಎಂ ಬಿಎಸ್‍ವೈ ಅವರ ಹೆಸರಿನಲ್ಲಿ ಶಾಸಕರಾಗಿದ್ದೇವೆ. ಯಡಿಯೂರಪ್ಪನವರ ಅವಧಿ ಮುಗಿದ ನಂತರ ಬಿಜೆಪಿಯಲ್ಲಿ ಮುಂದಿನ ದಿನಗಳಲ್ಲಿ ದಲಿತರಿಗೆ ಸಿಎಂ ಸ್ಥಾನ ಸಿಗುತ್ತದೆ ಎಂದರು.

ಬಿಜೆಪಿಯಿಂದಲೇ ದಲಿತರಿಗೆ ಒಳ್ಳೆಯ ಸ್ಥಾನಮಾನ ಸಿಗಲು ಸಾಧ್ಯ. ಕಾಂಗ್ರೆಸ್ ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ದಲಿತರ ಅಭಿವೃದ್ಧಿಯ ಬಗ್ಗೆ ಕಾಳಜಿ ತೋರಿಲ್ಲ. ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದರೂ ದಲಿತರಿಗೆ ಸಿಎಂ ಹಾಗೂ ಡಿಸಿಎಂ ಸ್ಥಾನವನ್ನು ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹಲವು ವರ್ಷ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಆದರೂ ಕೂಡ ಕಾಂಗ್ರೆಸ್ ಅವರಿಗೆ ಸಿಎಂ ಸ್ಥಾನ ನೀಡಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಅನಿವಾರ್ಯ ಪರಿಸ್ಥಿತಿಯಲ್ಲಿ ಜಿ.ಪರಮೇಶ್ವರಗೆ ಡಿಸಿಎಂ ಸ್ಥಾನ ಕೊಟ್ಟಿದ್ದರು ಎಂದಿದ್ದಾರೆ.

Home add -Advt

Related Articles

Back to top button