*ಅಧೋಗತಿ ತಲುಪಿದ ಶಿಕ್ಷಣ ಕ್ಷೇತ್ರ; ವಿದ್ಯಾರ್ಥಿಗಳಿಗೆ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ; ಬಿಜೆಪಿ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಕ್ಷೇತ್ರ ಅಧೋಗತಿ ತಲುಪಿದ್ದು, ವಸತಿ ನಿಲಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಶುದ್ಧ ನೀರು ಪೂರೈಸುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.
ಸಚಿವರಾದ ಹೆಚ್. ಸಿ. ಮಹದೇವಪ್ಪ, ಶಿವರಾಜ್ ತಂಗಡಗಿ ಗಾಢ ನಿದ್ರೆಯಿಂದ ಏಳದೆ ಇರುವುದರಿಂದ ರಾಜ್ಯದ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳು ಈಗ ಸಮಸ್ಯೆಗಳ ಆಲಯವಾಗಿವೆ. ಗ್ರಂಥಾಲಯ ವ್ಯವಸ್ಥೆ ಇಲ್ಲ, ಶುಚಿ ಕಿಟ್‌ಗಳಿಲ್ಲ, ಸಿಬ್ಬಂದಿಯೂ ಇಲ್ಲ. ಕನಿಷ್ಠ ಮೂಲಸೌಕರ್ಯ ಒದಗಿಸದಷ್ಟು ದಯನೀಯ ಸ್ಥಿತಿಗೆ ತಲುಪಿದೆ ಕಾಂಗ್ರೆಸ್ ಸರ್ಕಾರ ಎಂದು ವಾಗ್ದಾಳಿ ನಡೆಸಿದೆ.
ಭವಿಷ್ಯದ ಕನಸು ಹೊತ್ತು ವಿದ್ಯಾರ್ಥಿ ನಿಲಯಗಳಿಗೆ ಬರುವ ಬಡವರು, ದಲಿತರು, ಹಿಂದುಳಿದ ವರ್ಗಗಳು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಚೊಂಬು ಕೊಟ್ಟು ಕಲಿಕಾ ಸಾಮರ್ಥ್ಯ ಕುಸಿವಂತೆ ಮಾಡಿದೆ ಸಿದ್ದರಾಮಯ್ಯ ಸರ್ಕಾರ. ಕಾಂಗ್ರೆಸ್ ಸರ್ಕಾರಕ್ಕೆ ಬಡ ವಿದ್ಯಾರ್ಥಿಗಳ ವಸತಿ ನಿಲಯಗಳು ಅಂದ್ರೆ ಯಾಕಿಷ್ಟು ತಾತ್ಸಾರ? ಎಂದು ಪ್ರಶ್ನಿಸಿದೆ.