ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಚಾಲನೆ ನಿಡಲಾಗಿದೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಿಜೆಪಿ ಕಾರ್ಯಕಾರಿಣಿಗೆ ಚಾಲನೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದರು.
ಪಕ್ಷ ಸಂಘಟನೆ, ರಾಜ್ಯ ನಾಯಕರ ಪ್ರವಾಸ, ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಪರ್ಯಾಯ ಕಾರ್ಯಕ್ರಮಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಯಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಜಗದೀಶ ಶೆಟ್ಟರ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಹಾಜರಿದ್ದರು.
ಸೋಲಾರ್ ಹಗರಣದ ತನಿಖೆಯನ್ನೂ ಮಾಡಿ; ನಾನು ತಪ್ಪು ಮಾಡಿದರೆ ನನ್ನನ್ನು ಗಲ್ಲಿಗೇರಿಸಲಿ ಎಂದ ಡಿ.ಕೆ.ಶಿವಕುಮಾರ್
https://pragati.taskdun.com/politics/d-k-shivakumared-sommoncereaction/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ