ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಬಿಜೆಪಿ ವಿರುದ್ಧ 50% ಕಮಿಷನ್ ಆರೋಪ ಮಾಡಿದ ವಿಚಾರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.
ಮಧ್ಯಪ್ರದೇಶದ ಬಿಜೆಪಿ ವಿರುದ್ಧ 50% ಕಮಿಷನ್ ಆರೋಪ ಮಾಡಿದ್ದಕ್ಕೆ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್, ಮಾಜಿ ಸಚಿವ ಅರುಣ್ ಯಾದವ್ ಸೇರಿದಂತೆ ಹಿರಿಯ ನಾಯಕ ಟ್ವಿಟರ್ ಹ್ಯಾಂಡ್ಲರ್ ಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ಇಂದೋರ್ ಪೊಲೀಸರು ತಿಳಿಸಿದ್ದಾರೆ.
ಜ್ಞಾನೇಂದ್ರ ಅವಸ್ತಿ ಎಂಬುವವರ ಹೆಸರನ್ನು ಹೊಂದಿರುವ ನ್ಕಲಿ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ಕಾನೂನು ಸೆಲ್ ಸಂಚಾಲಕ ನಿಮೇಶ್ ಪಾಠಕ್ ದೂರು ನೀಡಿದ್ದರು. ರಾಜ್ಯ ಗುತ್ತಿಗೆದಾರರಿಗೆ 50% ಕಮಿಷನ್ ಕೇಳಲಾಗುತ್ತಿದೆ ಎಂದು ಪತ್ರದಾಲ್ಲಿ ಉಲ್ಲೇಖಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ಟ್ವಿಟರ್ ನಲ್ಲಿ ಮಧ್ಯಪ್ರದೇಶ ಬಿಜೆಪಿ ಕಮಿಷನ್ ನಲ್ಲಿ ತನ್ನದೇ ದಾಖಲೆ ಮುರಿದಿದೆ. ಕರ್ನಾಟಕದಲ್ಲಿ ಬಿಜೆಪಿ ೪೦% ಕಮಿಷನ್ ಸಂಗ್ರಹಿಸುತ್ತಿತ್ತು. ಮಧ್ಯಪ್ರದೇಶ ಬಿಜೆಪಿ ಆ ದಾಖಲೆ ಮುರಿದು 50% ಕಮಿಷನ್ ಸಂಗ್ರಹಿಸುತ್ತಿದೆ ಎಂದು ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಟ್ವೀಟ್ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ