ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ನಾಯಕರ ಆಂತರಿಕ ಬೇಗುದಿಗೆ ಕಡಿವಾಣ ಹಾಕಲು ಹೈಕಮಾಂಡ್ ಯೋಜನೆ ರೂಪಿಸಿದ್ದು, ಅಸಮಾಧಾನಿತ ಸಚಿವರ ಹಾಗೂ ಶಾಸಕರ ಪ್ರತ್ಯೇಕ ಸಭೆ ಕರೆದು ಚರ್ಚಿಸುವಂತೆ ಸಂದೇಶ ರವಾನೆಯಾಗಿದೆ.
ಈ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅತೃಪ್ತ ನಾಯಕರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಿ, ಆಂತರಿಕ ಬಿಕ್ಕಟ್ಟು ಶಮನಕ್ಕೆ ಯತ್ನಿಸಲಿದ್ದಾರೆ. ಸಚಿವ ಸಿಪಿ ಯೋಗೇಶ್ವರ್ ದೆಹಲಿ ಭೇಟಿ ಬೆನ್ನಲ್ಲೇ ಆರಂಭವಾದ ನಾಯಕತ್ವ ಬದಲಾವಣೆ ಚರ್ಚೆ, ಯೋಗೇಶ್ವರ್ ರನ್ನು ಸಂಪುಟದಿಂದ ಕೈಬಿಡುವಂತೆ ಸಹಿಸಂಗ್ರಹ, ರಾಜ್ಯ ಬಿಜೆಪಿ ನಾಯಕರ ದಿನಕ್ಕೊಂದು ಹೇಳಿಕೆಗಳು, ಶಾಸಕ ಯತ್ನಾಳ್ ಅಸಮಾಧಾನ ಈ ಬೆಳವಣಿಗೆ ನಡುವೆಯೇ ಬಿ.ವೈ.ವಿಜಯೇಂದ್ರ ದೆಹಲಿಗೆ ತೆರಳಿ ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ದೂರು ನೀಡಿದ್ದಾರೆ ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡ ಬಿಜೆಪಿ ವರಿಷ್ಠರು ರಾಜ್ಯ ಬಿಜೆಪಿ ಆಂತರಿಕ ಬಿನ್ನಮತ ಶಮನಗೊಳಿಸಲು ರಾಜ್ಯಾಧ್ಯಕ್ಷರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಇದೇ ಕಾರಣಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾರದೊಳಗೆ ಅತೃಪ್ತರ ಜೊತೆ ಸಭೆ ನಡೆಸಲಿದ್ದಾರೆ. ಬಳಿಕ ಎರಡೂ ಕಡೆಶಾಸಕರ ಸಭೆ ಕರೆದು ಚರ್ಚೆ ನಡೆಸಲಿದ್ದು, ಸಭೆಯಲ್ಲಿ ಸಿಎಂ ಯಡಿಯೂರಪ್ಪ ಕೂಡ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ