
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅಮಿತ್ ಮಾಳವಿಯ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಅಮಿತ್ ಮಾಳವಿಯ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ