Kannada NewsKarnataka NewsLatest
ಹಿರೇಬಾಗೇವಾಡಿ ಗ್ರಾಮಸ್ಥರಿಗೆ ದಿನಸಿ ಕಿಟ್ ವಿತರಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮಸ್ಥರಿಗೆ ಶುಕ್ರವಾರ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.
ಕೊರೋನಾದಿಂದಾಗಿ ಹಿರೇಬಾಗೇವಾಡಿ ಗ್ರಾಮಸ್ಥರು ತೀವ್ರ ಸಂಕಷ್ಟಕ್ಕೀಡಾಗಿದ್ದು, ಅವರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದ್ದು ಇಲ್ಲಿ ಉಲ್ಲೇಖನೀಯ. ಜಿಲ್ಲಾಧಿಕಾರಿಗಳನ್ನು ಗ್ರಾಮಕ್ಕೆ ಕರೆದೊಯ್ದು ಸಭೆಯನ್ನೂ ನಡೆಸಿದ್ದರು.
ತಮ್ಮ ಲಕ್ಷ್ಮಿ ತಾಯಿ ಫೌಂಡೇಶನ್ ನಿಂದ ಕೂಡ ದಿನಸಿ, ತರಕಾರಿ ಸೇರಿದಂತೆ ಹಲವು ರೀತಿಯಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಹಿರೇಬಾಗೇವಾಡಿ ಗ್ರಾಮಸ್ಥರಿಗೆ ನೆರವು ನೀಡಿದ್ದರು. ಇದೀಗ ಜಿಲ್ಲಾಡಳಿತದಿಂದ ದಿನಸಿ ಕಿಟ್ ಗಳನ್ನು ವಿತರಿಸಲಾಗಿದೆ.


