Kannada NewsKarnataka NewsPolitics

*ಖಾಲಿ ಚೊಂಬು, ಚಿಪ್ಪು ಕೈಯಲ್ಲಿ ಹಿಡಿದು ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಣಕಾಸು ಕೊರತೆ ಇದ್ದು, ಹೊಸ ಯೋಜನೆಗಳ ಘೋಷಣೆ ಬಗ್ಗೆ ಹಣಕಾಸು ಇಲಾಖೆ ಸರ್ಕಾಅರಕ್ಕೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆರ್ಥಿಕವಾಗಿ ದುವಾಳಿಯಾಗಿದ್ದು, ಇದು ಪಾಪರ್ ಸರ್ಕಾರ ಎಂದು ಆರೋಪಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಾಯಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

. 2026-27ರಲ್ಲಿ ರಾಜ್ಯದ ವಿತ್ತೀಯ ಕೊರತೆ 2.95%ಕ್ಕೆ ತಲುಪುವ ಅಂದಾಜಿದ್ದು, ರಾಜ್ಯದ ಆದಾಯ ಕೊರತೆ 22,957 ಕೋಟಿಗಳಾಗಿವೆ. FRBM ಮಾನದಂಡದ ಪ್ರಕಾರ ಆದಾಯ ಕೊರತೆ ಶೂನ್ಯವಾಗಿರಬೇಕು. ಆದರೆ ರಾಜ್ಯದಲ್ಲಿ ವಿತ್ತೀಯ ಕೊರತೆಯ ಮಿತಿ 3% ಇದೆ ಎಂದು ಹಣಕಾಸು ಇಲಾಖೆ ಉಲ್ಲೇಖಿಸಿದೆ. ಇದನ್ನೇ ಸರ್ಕಾರದ ವಿರುದ್ಧ ಅಸ್ತ್ರವಾಗಿಸಿಕೊಂಡಿರುವ ವಿಪಕ್ಷ ಬಿಜೆಪಿ-ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಬಿಜೆಪಿ, ಜೆಡಿಎಸ್ ನಾಯಕರು, ಶಾಸಕರು ಕೈಯಲ್ಲಿ ಚೊಂಬು, ಚಿಪ್ಪು ಹಿಡಿದು ಇದು ದಿವಾಳಿ ಸರ್ಕಾರ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ವಿಒಪಕ್ಷ ನಾಯಕ ಆರ್.ಅಶೋಕ್, ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಗೃಹಲಕ್ಷಿ ಫಲಾನುಭವಿಗಳಿಗೆ ಖಾತೆಗೆ ಹಣ ಹೋಗುತ್ತಿಲ್ಲ. ಅಂಗನವಾಡಿ ಕಾರ್ಯಕರ್ತರು, ಹಿರಿಯ ನಾಗರಿಗೆ ಸಹಾಯಧನ ನಿಂತು ಹಲವು ತಿಂಗಳುಗಳೇ ಕಳೆದುವೆ. ಕಾರಣ ಪಾವತಿ ಮಾಡಲು ಸರ್ಕಾರದ ಬಳಿ ಹಣವಿಲ್ಲ. ಇನ್ನು ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು ರೈತರು ಬೆಳೆ ಬೆಳೆಯಲಾಗದೇ ಪರಿಹಾರ ಹಣಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಈವರೆಗೂ ಸರ್ಕಾರ ಪರಿಹಾರ ಹಣ ನೀಡಿಲ್ಲ. ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಇಂತಹ ಸ್ಥಿತಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆ ಜಿಲ್ಲೆಗಳಲ್ಲಿಯೂ ಸಚಿವ ಸಂಪುಟ ಸಭೆ ನಡೆಸಿ ಮನಬಂದಂತೆ ಅನುದಾನ ಘೋಷಿಸುತ್ತಿದ್ದಾರೆ. ಯಾವುದೇ ಯೋಜನೆಗಳು ಅನುಷ್ಠಾನಕ್ಕೆ ಬರಲ್ಲ. ಸುಮ್ಮನೇ ಘೋಷಣೆ ಮಡುವ ಮೂಲಕ ಸರ್ಕಾರ ಜನರ ಕೈಗೆ ಖಾಲಿ ಚೊಂಬು ಕೊಡುತ್ತಿದೆ ಎಂದು ಕಿಡಿಕಾರಿದರು. ಹಣಕಾಸು ಇಲಾಖೆ ಸಮರ್ಪಕವಾಗಿ ನಡೆಸಿಕೊಂಡು ಹೋಗುವಲ್ಲಿ ಸಿಎಂ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Related Articles

Back to top button