ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷದಿಂದ ಆರಂಭವಾಗಿದ್ದ ಕಿಚ್ಚು, ರಾಜಕೀಯ ನಾಯಕರ ರಾಷ್ಟ್ರಧ್ವಜದ ಕುರಿತ ಹೇಳಿಕೆಗಳಿಗೂ ಬಂದು ನಿಂತಿದೆ.
ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಕರ್ನಾಟಕದಲ್ಲಿನ ಬೆಳವಣಿಗೆಗಳನ್ನು ಗಮನಿಸುತ್ತಿರುವ ಬಿಜೆಪಿ ವರಿಷ್ಠರು, ಇದೀಗ ಸಚಿವ ಈಶ್ವರಪ್ಪ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇಂಡಿಯಾ ಟುಡೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರಧ್ವಜ ಜಾಗದಲ್ಲಿ ಕೇಸರಿ ಧ್ವಜ ಹೇಳಿಕೆ ವಿಚಾರವಾಗಿ ಈಶ್ವರಪ್ಪ ಅವರಿಗೆ ತರಾಟೆಗೆ ತೆಗೆದುಕೊಂಡಿದ್ದಾಗಿ ತಿಳಿಸಿದ್ದಾರೆ.
ಸಚಿವ ಈಶ್ವರಪ್ಪ ಅವರಿಗೆ ಕರೆ ಮಾಡಿ, ಛೀಮಾರಿ ಹಾಕಿದ್ದು, ಹೇಳಿಕೆಗಳನ್ನು ಕೊಡುವಾಗ ಎಚ್ಚರದಿಂದ ಮಾತನಾಡುವಂತೆ ಸೂಚಿಸಿದ್ದಾಗಿ ತಿಳಿಸಿದ್ದಾರೆ.
ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ; ಎಲ್ಲಾ 12 ಆರೋಪಿಗಳು ಅರೆಸ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ