
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ.
ವೆಂಕಟೇಶ್ ಕುರುಬ (31) ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ. ತಡರಾತ್ರಿ ದುಷ್ಕರ್ಮಿಗಳು ವೆಂಕಟೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಗಂಗಾವತಿಯ ಲೀಲಾವತಿ ಆಸ್ಪತ್ರೆಗೆ ಮುಂಭಾಗ ಈ ಘಟನೆ ನಡೆದಿದೆ.
ಮಧ್ಯ ರಾತ್ರಿ ಎರಡುಗಂಟೆ ಸುಮಾರಿಗೆ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವೆಂಕಟೇಶ್ ಬೈಕ್ ನ್ನು ಫಾಲೋಮಾಡಿಕೊಂಡು ಬಂದು ಕೊಲೆಗೈದಿದ್ದಾರೆ. ಗಂಗಾವತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.