Politics

*ಬಿಜೆಪಿ ನಾಯಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸ್ಥಳೀಯ ನಾಯಕಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮತ್ತಿಕೆರೆಯಲ್ಲಿ ನಡೆದಿದೆ.

ಮಂಜುಳಾ ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿಯ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿ. ಮತ್ತಿಕೆರೆಯ ತಮ್ಮ ನಿವಾಸದಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾವಿಗೂ ಮುನ್ನ ಮುಂಜುಳಾ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button