
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದು, ರಾಜ್ಯ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಇಂದು ಮಧ್ಯಾಹ್ನ ನಿಗದಿಯಾಗಿದ್ದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬದಲಾವಣೆಯಾಗಿದೆ.
ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿರುವ ಗೃಹ ಸಚಿವ ಅಮಿತ್ ಶಾ ಅವರು, ಮಧ್ಯಾಹ್ನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಸರ್ಕಾರಿ ನಿವಾಸದಲ್ಲಿ ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಶಾಸಕರು, ಸಂಸದರಿಗೂ ಭೋಜನಕೂಟಕ್ಕೆ ಆಹ್ವಾನಿಸುವಂತೆ ಅಮಿತ್ ಶಾ ಸಿಎಂಗೆ ಸೂಚಿಸಿದ್ದು, ಅದರಂತೆ ಬಿಜೆಪಿ ಎಲ್ಲಾ ನಾಯಕರಿಗೂ ಭೋಜನಕೂಟಕ್ಕೆ ವ್ಯವಸ್ಥೆ ಮಾಡಲಾಗಿದೆ.
ಭೋಜನ ಕೂಟದ ಬಳಿಕ ಮಧ್ಯಾಹ್ನ 3ಗಂಟೆಗೆ ಖಾಸಗಿ ಹೋಟೆಲ್ ನಲ್ಲಿ ನಡೆಯಬೇಕಿದ್ದ ಬಿಜೆಪಿ ಅನೌಪಚಾರಿಕ ಶಾಸಕಾಂಗ ಪಕ್ಷದ ಸಭೆ ಸ್ಥಳ ಇದೀಗ ದಿಢೀರ್ ಬದಲಾವಣೆಯಾಗಿದ್ದು, ಹೋಟೆಲ್ ಬದಲಾಗಿ ಸಿಎಂ ಸರ್ಕಾರಿ ನಿವಾಸದಲ್ಲಿಯೇ ಸಭೆ ನಿಗದಿಯಾಗಿದೆ ಎಂದು ತಿಳಿದುಬಂದಿದೆ.
ಇಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ, ವಿಧಾನಸಭಾ ಚುನಾವಣೆ ಸಿದ್ಧತೆ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬರುವ ನಿರೀಕ್ಷೆ ಇದೆ.
ರಾಜ್ಯದ ಗಡಿ ವಿಚಾರ- ಸರ್ಕಾರದ ನಿಲುವು ಸ್ಪಷ್ಟ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ