Karnataka NewsPolitics

*ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್: FIRಗೆ ಹೈಕೋರ್ಟ್ ತಡೆಯಾಜ್ಞೆ*

ಪ್ರಗತಿವಾಹಿನಿ ಸುದ್ದಿ: ಚುನಾವಣಾ ಬಾಂಡ್ ಮೂಲಕ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೈಕೋರ್ಟ್ ಗೆ ಬೆಳಿಗ್ಗೆ ಅರ್ಜಿ ಸಲ್ಲಿಸಿದ್ದರು. ತುರ್ತು ವಿಚಾರಣೆ ನಡೆಸುವಂತೆಯೂ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಬಿಜೆಪಿ ನಾಯಕರ ವಿರುದ್ಧ ದಾಖಲಾಗಿರುವ ಎಫ್ಐಆರ್ ಗೆ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.

Home add -Advt

ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಇಡಿ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಳೀನ್ ಕುಮಾರ್ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಪದಾಧಿಕರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬೆಂಗಳೂರಿನ ತಿಲಕ ನಗರ ಠಾಣೆ ಪೊಲೀಸರಿಗೆ ಆದೇಶ ನೀಡಿತ್ತು.

ಇದರ ಬೆನ್ನಲ್ಲೇ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಕೋರಿ ನಳೀನ್ ಕುಮಾರ್ ಕಟೀಲ್ ಹೈಕೋರ್ಟ್ ಮೆಟ್ಟಿಲೇರಿದ್ದರು.


Related Articles

Back to top button