Latest

5-6 ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆಗೆ ಸಜ್ಜು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಆಪರೇಷನ್ ಕಮಲ ಚಟುವಟಿಕೆಗಳು ಆರಂಭವಾಗಿವೆ. 5 ರಿಂದ 6 ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ಮೈಸೂರು ಭಾಗದ ಘಟಾನುಘಟಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ನಾಯಕರೊಂದಿಗೆ ಕೊನೆ ಹಂತದ ಮಾತುಕತೆಗಳು ನಡೆಯುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷರ ಗ್ರೀನ್ ಸಿಗ್ನಲ್ ಮಾತ್ರ ಬಾಕಿ ಇದೆ ಎಂದರು.

Home add -Advt

ಕಂಡಿಷನ್ ಗಳಿಲ್ಲದೇ ಬಿಜೆಪಿಗೆ ಸೇರ್ಪಡೆಯಾಗಲು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷದವರೂ ಬಿಜೆಪಿಗೆ ಬರುತ್ತಿದ್ದಾರೆ. ಆ ನಾಯಕರು ಯಾರು ಎಂದು ಹೇಳಲು ಸಾಧ್ಯವಿಲ್ಲ. ಕೊನೆ ಹಂತದ ಮಾತುಕತೆ ಮುಗಿಯಲಿ ನಂತರ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಮಾಜಿ ಸಿಎಂ,ರಾಜಕೀಯ ನಾಯಕರು, ಸಾಹಿತಿ, ನಟ ಸೇರಿ 61 ಜನರಿಗೆ ಜೀವ ಬೆದರಿಕೆ ಪತ್ರ

Related Articles

Back to top button