Karnataka NewsLatestPolitics

*ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆತ: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು, ಅಲ್ಲಿಯೇ ಧರಣಿ ಕುಳಿತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

ಜನಪ್ರತಿನಿಧಿಯ ಮೇಲೆಯೇ ಮೊಟ್ಟೆ ಎಸೆದು, ಹಲ್ಲೆ ನಡೆಸಿ ಆಡಳಿತ ಪಕ್ಷದ ಕಾರ್ಯಕರ್ತರು ರೌಡಿಗಳಂತೆ ವರ್ತಿಸಿದ್ದಾರೆ. ಶಾಸಕನ ಮೇಲೆಯೇ ಮೊಟ್ಟೆ ದಾಳಿ ನಡೆಸಿರುವುದು ಗೂಂಡಾಗಳ ವರ್ತನೆಯಾಗಿದೆ. ವಿಪಕ್ಷ ನಾಯಕರ ಮೇಲೆ ಆಡಳಿತ ಪಕ್ಷದ ಕಾರ್ಯಕರ್ತರೇ ಗೂಂಡಾಗಳಂತೆ ವರ್ತಿಸುತ್ತಿರುವಾಗ ಇನ್ನು ಜನಸಾಮಾನ್ಯರ ಗತಿಯೇನು? ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.

Related Articles

Back to top button