
ನಾಲ್ಕು ಹಂತಗಳಲ್ಲಿ ಹೋರಾಟಕ್ಕೆ ಸಜ್ಜು
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದ್ದು, ಏ.2ರಿಂದ ಅಹೋರಾತ್ರಿ ಧರಣಿ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಜಯೇಂದ್ರ ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಬರೆ ನೀಡುತ್ತಿದೆ. ನಾಳೆಯಿಂದ ದುಬಾರಿ ದುನಿಯಾ ಆರಂಭಿಸಲು ಸರ್ಕಾರ ಮುಂದಾಗಿದೆ. ಜನಸಾಮಾನ್ಯರ ಬದುಕು ದುಸ್ಥರವಾಗುತ್ತಿದೆ. ಮತದಾರರಿಗೆ ವರದಾನವಾಗುವ ಬದಲು ಸರ್ಕಾರ ಶಾಪವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಲ್ಕು ಹಂತಗಳಲ್ಲಿ ಹೋರಾಟ ನಡೆಸಲಿದೆ. ಬೆಲೆಯೇರಿಕೆ ನೀತಿ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು. ಏ.2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು. ಏ.5ರಂದು ರಾಜ್ಯದ ಎಲ್ಲಾ ಜಿಲ್ಲಾ, ತಾಅಲೂಕು ಕೇಂದ್ರಗಳಲ್ಲಿಯೂ ಪ್ರತಿಭಟನೆ ನಡೆಸಲಾಗುವುದು. ಏ.7ರಂದು ಮೈಸೂರು, ಚಾಮರಾಜನಗರದಿಂದ ಹೋರಾಟಕ್ಕೆ ಪ್ರಹ್ಲಾದ್ ಜೋಶಿ ಚಾಲನೆ ನೀಡಲಿದ್ದಾರೆ. ಏ.8ರಂದು ಮಂಡ್ಯ ಹಾಸನ, ಏ.9ರಂದು ಕೊಡಗು ಮಂಗಳೂರು, ಏ.10ರಂದು ಉಡುಪಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ಏ. 13ರಿಂದ ಎರಡನೇ ಹಂತದಲ್ಲಿ ಹೋರಾಟ ಆರಂಭಿಸಲಾಗುವುದು ಎಂದು ಹೇಳಿದರು.