Cancer Hospital 2
Beereshwara 36
LaxmiTai 5

*ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದ ನಾಯಕರು*

Anvekar 3

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಕೈಯಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು, ಇದು ಕೊಲೆಗಡುಕ ಸರ್ಕಾರ ಎಂದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Emergency Service

ಈ ವೇಳೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಜೈನಮುನಿ ಹತ್ಯೆ, ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ನಡೆದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆದರೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲೇ ಮುಳುಗಿದೆ. ಈ ಸರ್ಕಾರ ದಪ್ಪ ಚರ್ಮದ ಸರ್ಕಾರ, ಇದಕ್ಕೆ ರಾಜ್ಯದಲ್ಲಿ ನಡೆಯುವ ಹತ್ಯೆ ಪ್ರಕರಣಗಳನ್ನು ತಡೆಯಲಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಬಳಿಕ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ನಾಯಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ಜೈನಮುನಿ ಹತ್ಯೆ ಕೇಸ್ ತನಿಖೆಯನ್ನು ಸಿಬಿಐ ಗೆ ವಹಿಸುವಂತೆ ಸೂಚಿಸಬೇಕು ಎಂದು ಮನವಿ ಮಾಡಿದರು.

Bottom Add3
Bottom Ad 2