Belagavi NewsBelgaum NewsKannada NewsKarnataka NewsLatestPolitics

*ಬೆಳಗಾವಿ: ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ*

30 ಜನರು ಪೊಲೀಸ್ ವಶಕ್ಕೆ

ಪ್ರಗತಿವಾಹಿನಿ ಸುದ್ದಿ: ಕೇಂದ್ರದಿಂದ ರಾಜ್ಯಕ್ಕೆ ಅನುದಾನ, ತೆರಿಗೆ ಹಂಚಿಕೆಯಲ್ಲಿ ಆಗಿರುವ ಅನ್ಯಾಯ ಖಂಡಿಸಿ ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ ಇತ್ತ ರಾಜ್ಯದಲ್ಲಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದೆ.

Home add -Advt

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆದಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಬೆಳಗಾವಿಯಲ್ಲಿಯೂ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿದೆ. ಬೆಳಗಾವಿಯ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗುತ್ತ ಬ್ಯಾರಿಕೇಡ್ ಗಳನ್ನು ತಳ್ಳಿ ನುಗ್ಗಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದಾರೆ.

ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆಯಲು ಯತ್ನಿಸಿದ್ದಾರೆ. ಪೊಲೀಸರು ಹಾಗೂ ಬಿಜೆಪಿ ಪ್ರತಿಭಟನಾಕಾರರ ನಡುವೆ ನೂಕಾಟ ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

Related Articles

Back to top button