*ಅತ್ತ ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ಇತ್ತ ರಾಜ್ಯ ರಾಜಧಾನಿಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಧರಣಿ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನುದಾನ ಬಿಡುಗಡೆ, ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿರುವುದನ್ನು ಖಂಡಿಸಿ ಅತ್ತ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿಭಟನೆ ನಡೆಸಿದ್ದರೆ ಇತ್ತ ರಾಜಧಾನಿ ಬೆಂಗಳೂರಿನಲ್ಲಿ ವಿಪಕ್ಷ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧರಣಿ ಕುಳಿತಿದೆ.
ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ.ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ನ ಪ್ರತಿಭಟನೆಗೆ ಪ್ರತಿಯಾಗಿ ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಧಾನಸೌಧ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ ನಾಯಕರು ಧರಣಿ ನಡೆಸಿದ್ದಾರೆ.
ಬರ ಪೀಡಿತ ತಾಲೂಕುಗಳಲ್ಲಿ ಸರ್ಕಾರ ನೀರಿನ ಸಮಸ್ಯೆ ನಿವಾರಿಸಿಲ್ಲ, ನಯಾಪೈಸೆ ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸರ್ಕಾರ ಪ್ರತಿಭಟನೆ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ