Karnataka NewsLatestPolitics

*ಮೂರು ಪ್ರತ್ಯೇಕ ಟೀಂ ಗಳಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ಬಿಜೆಪಿ ಸಜ್ಜು*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮ ಹಗರಣದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ನಡೆಸಲು ಸಿದ್ಧವಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಮುತ್ತಿಗೆ ಹಾಕಲು ಯೋಜನೆ ರೂಪಿಸಿದೆ.

ಕಳೆದ ಒಂದು ವಾರದಿಂದ ಸದನದ ಒಳಗೆ ಮತ್ತು ಹೊರಗೆ ಈ ವಿಚಾರದಲ್ಲಿ ಗದ್ದಲ ಸೃಷ್ಟಿಸಿರುವ ಬಿಜೆಪಿ, ತನ್ನ ಹೋರಾಟವನ್ನು ನಿರ್ಣಾಯಕ ಹಂತಕ್ಕೆ ಕೊಂಡೊಯ್ಯಲು ಮುಂದಾಗಿದೆ. ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ಬಿಜೆಪಿ ನಾಯಕರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದ್ದಾರೆ.

ಬಿಜೆಪಿ ರಾಜ್ಯ ನಾಯಕರಾದ ಆರ್. ಅಶೋಕ್, ಬಿ.ವೈ. ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ, ಎನ್. ರವಿಕುಮಾರ್, ಮತ್ತು ಪ್ರೀತಂ ಗೌಡ ನೇತೃತ್ವದಲ್ಲಿ ಮೂರು ಪ್ರತ್ಯೇಕ ತಂಡಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿವೆ. ಪ್ರತಿಭಟನೆಗೆ ಬೆಂಗಳೂರು ನಗರದ ಪ್ರತಿ ವಿಧಾನಸಭಾ ಕ್ಷೇತ್ರದಿಂದ ತಲಾ 200 ಕಾರ್ಯಕರ್ತರನ್ನು ಕರೆತರಲು ನಾಯಕರು ಸೂಚನೆ ನೀಡಿದ್ದಾರೆ. ಜೆಡಿಎಸ್ ಸಹ ಈ ಪ್ರತಿಭಟನೆಗೆ ಸಾಥ್ ನೀಡಲು ಮುಂದಾಗಿದ್ದು, ಭಾರಿ ಸಂಘರ್ಷವೇ ನಡೆಯಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button