*ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ತೀವೆಅಗೊಳಿಸಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಕೆ.ಕೆ.ಗೆಸ್ಟ್ ಹೌಸ್ ಬಳಿಯೇ ಕಾರ್ಯಕರ್ತರನ್ನು ತಡೆದಿದ್ದಾರೆ. ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಗ್ವಾದ ಶುರುವಾಗಿದ್ದು, ಪರಿಸ್ಥಿತಿ ಕೈ ಮೀರುವ ಹಂತ ತಲುಪುತ್ತಿದ್ದಂತೆ ಪೊಲೀಸರು ಹಲವು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಮುಡಾ … Continue reading *ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ*