*ರಾಜ್ಯಸಭಾ ಸದಸ್ಯ ರಾಮರಾವ್ ವಡ್ಕುಟೆ ಹೃದಯಾಘಾತದಿಂದ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಬಿಜೆಪಿ ಸದಸ್ಯ ರಾಮರಾವ್ ವಡ್ಕುಟೆ ಇಂದು ನವದೆಹಲಿಯ ಏಮ್ಸ್​​ನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ವೇಳೆ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಹಾಗೂ ತೀವ್ರ ಅನಾರೋಗ್ಯದ ಕಾರಣದಿಂದಾಗಿ ರಾಮರಾವ್ ವಡ್ಕುಟೆ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ತಜ್ಞ ವೈದ್ಯರ ತಂಡವು ನಿರಂತರ ಚಿಕಿತ್ಸೆ ನೀಡಿದರೂ ಅವರ ಆರೋಗ್ಯ … Continue reading *ರಾಜ್ಯಸಭಾ ಸದಸ್ಯ ರಾಮರಾವ್ ವಡ್ಕುಟೆ ಹೃದಯಾಘಾತದಿಂದ ವಿಧಿವಶ*