Latest

ಸಿನಿಮಾ ಶೂಟಿಂಗ್ ವೇಳೆ ಮತ್ತೊಂದು ಅವಘಡ; ನಟ ಪ್ರಕಾಶ್ ರಾಜ್ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಸಿನಿಮಾ ಚಿತ್ರೀಕರಣದ ವೇಳೆ ಹಿರಿಯ ನಟ ಪ್ರಕಾಶ್ ರಾಜ್ ಗೆ ಗಂಭೀರ ಗಾಯವಾಗಿದ್ದು, ಶಸ್ತ್ರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಮಿಳು ನಟ ಧನುಷ್ ಅಭಿನಯದ ’ತಿರುಚಿತ್ರಾಂಬರಂ’ ಎಂಬ ಚಿತ್ರದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಪ್ರಕಾಶ್ ರಾಜ್ ಅವರ ಕೈಗೆ ಗಂಭೀರ ಗಾಯವಾಗಿದೆ. ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

Home add -Advt

ಈ ಕುರಿತು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದು, ಶೂಟಿಂಗ್ ವೇಳೆ ಬಿದ್ದು ಕೈಗೆ ಸಣ್ಣ ಪೆಟ್ಟಾಗಿದೆ. ಶಸ್ತ್ರ ಚಿಕಿತ್ಸೆಗಾಗಿ ನನ್ನ ಸ್ನೇಹಿತ ಡಾ.ಗುರುವಾರೆಡ್ದಿ ಅವರ ಆಸ್ಪತ್ರೆಗೆ ತೆರಳುತ್ತಿದ್ದೇನೆ. ಬೇಗನೇ ಗುಣಮುಖನಾಗುತ್ತೇನೆ, ಆತಂಕ ಪಡಬೇಕಿಲ್ಲ ಎಂದು ತಿಳಿಸಿದ್ದಾರೆ.

ನಿರ್ದೇಶಕ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಒಟ್ಟಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ತಾಯಿ-ಮಗ ಪಾಸ್

Related Articles

Back to top button