Kannada NewsKarnataka NewsLatestPolitics

*ಟಿಕೆಟ್ ಮಿಸ್: ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನ್ನೇ ಪಟ್ಟಿಯಲ್ಲಿ ಹಲವು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದ್ದು, ಪಕ್ಷದ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಕೊಪ್ಪಳ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಗಣ್ಣ ಕರಡಿಗೆ ಟಿಕೆಟ್ ಮಿಸ್ ಆಗಿದ್ದು, ಡಾ.ಕೆ.ಬಸವರಾಜ್ ಗೆ ಟಿಕೆಟ್ ನೀಡಲಾಗಿದೆ. ಇದರಿಂದ ಸಂಗಣ್ಣ ಕರಡಿ ಬೆಂಬಲಿಗರು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಪ್ಪಳ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಸಂಗಣ್ಣ ಕರಡಿ ಬೆಂಬಲಿಗರು, ಕಚೇರಿಗೆ ನುಗ್ಗಿ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಬಿಜೆಪಿ ಕಚೇರಿಯ ಗಾಜುಗಳು ಪುಡಿ ಪುಡಿಯಾಗಿದ್ದು, ಪೀಠೋಪಕರಣಗಳನ್ನು ಹಾನಿಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಗಣ್ಣ ಕರಡಿಗೆ ನ್ಯಾಯ ಬೇಕು, ನಮಗೆ ನ್ಯಾಯಕೊಡಿ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸ್ವತಃ ಸಂಗಣ್ಣ ಕರಡಿ ಬೆಂಬಲಿಗರಲ್ಲಿ ಮನವಿ ಮಾಡಿದ್ದು, ಸಮಾಧಾನವಾಗಿರುವಂತೆ ಹಾಗೂ ಶಾಂತಿಯುತವಾಗಿ ನಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಹಲವು ಆಕಾಂಕ್ಷಿಗಳಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಪಕ್ಷದ ವಿರುದ್ಧವೇ ಅಸಮಾಧಾನ ಸ್ಫೋಟಗೊಳ್ಳಲು ಕಾರಣವಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button