ಚಿಕ್ಕೋಡಿ: ‘ಶಂಖನಾದ’ ಅಭಿಯಾನಕ್ಕೆ ಬಿಜೆಪಿ ಚಾಲನೆ; ಸಾಮಾಜಿಕ ಜಾಲತಾಣಗಳ ಮೂಲಕ ಕೇಂದ್ರದ ಸಾಧನೆ ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಕರೆ
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿ, ಈಗಾಗಲೇ ‘ಶಂಖನಾದ’ ಅಭಿಯಾನಕ್ಕೆ ಚಾಲನೆ ನೀಡಿದೆ. ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಯಾವ ರೀತಿ ಸಕ್ರಿಯರಾಗಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಡಿಜಿಟಲ್ ಮೇಡಿಯಾ ರಾಜ್ಯ ಸಂಚಾಲಕರಾದ ವಿಕಾಸ್ ಪುತ್ತೂರು ತಿಳಿಸಿದರು.
ಚಿಕ್ಕೋಡಿಯಲ್ಲಿ ನಡೆದ ಶಂಖನಾದ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಅಭಿಯಾನಕ್ಕೆ ಪಕ್ಷದ ಕಾರ್ಯಕರ್ತರಷ್ಟೇ ಅಲ್ಲದೆ, ಪಕ್ಷದ ಚಿಂತನೆಗಳೊಂದಿಗೆ ಹೆಜ್ಜೆ ಹಾಕುತ್ತಿರುವ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, ಅಂಥವರಿಗೆ ಪಕ್ಷದ ವಿಚಾರಗಳನ್ನು ಪರಿಣಾಮಕಾರಿಯಾಗಿ ತಿಳಿಸುವುದು ಮತ್ತು ಕೇಂದ್ರ ಸರಕಾರದ ಸಾಧನೆಗಳನ್ನು ಮನೆ-ಮನಗಳಿಗೆ ಮುಟ್ಟಿಸುವುದು ಅಭಿಯಾನದ ಮುಖ್ಯ ಉದ್ದೇಶ ಎಂದರು.
ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಪ್ರಸಾದ ಪಚಂಡಿ ಮಾತನಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಡಿಜಿಟಲ್ ಮೇಡಿಯಾದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷರಾದ ಡಾ ರಾಜೇಶ್ ನೇರ್ಲಿಯವರು ವಹಿಸಿ ಶಂಖನಾದ ಅಭಿಯಾನ ಮತ್ತು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಾಕ್ಷಿಕ ಅಭಿಯಾನದಡಿ ಲೋಕಸಭೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ ಶಿಬಿರಗಳು, ಮಂದಿರ ಶಾಲಾ ಆವರಣ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ ಹೀಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ನರೇಂದ್ರ ಮೂರ್ತಿ, ರಾಘವೇಂದ್ರ ನಾಗೂರ, ಶಂಕರ, ಜೆ ಕೃಷ , ದುಂಡಪ್ಪಾ ಬೆಂಡವಾಡೆ, ರಮೇಶ್ ಖೇತಗೌಡರ, ಅಪ್ಪಾಸಾಹೇಬ ಚೌಗಲಾ ಮಲ್ಲಿಕಾರ್ಜುನ ಖಾನಗೌಡರ, ಬಸವರಾಜ ಡೋಣವಾಡೆ, ಡಾ ರವಿ ಸಂಕ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಂದೀಪ್ ಖಂಜಿ ವಂದಿಸಿದರು, ಶಿವಾನಂದ ನವಿನಾಳೆ ನಿರೂಪಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ