LatestUncategorized

*ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಯಾರೆಲ್ಲಾ ಇದ್ದಾರೆ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಮಾತ್ರ ಬಾಕಿಯಿದ್ದು, ರಾಜ್ಯಕೀಯ ಪಕ್ಷಗಳಿಂದ ಅಬ್ಬರದ ಪ್ರಚಾರ ಆರಂಭವಾಗಿದೆ. ಈ ನಡುವೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

ಮೇ 10 ರಂದು ರಾಜ್ಯದ 224 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಮತಗಳ ಕ್ರೋಢಿಕರಣಕ್ಕೆ ಬಿಜೆಪಿ ಹೈಕಮಾಂಡ್ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

Home add -Advt

ಸ್ಟಾರ್ ಪ್ರಚಾರಕರಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಿ.ಟಿ.ರವಿ, ಅಣ್ಣಾಮಲೈ, ಸಂಸದ, ನಟ ಜಗ್ಗೇಶ್, ನಟಿಯರಾದ ಶೃತಿ, ತಾರಾ ಸೇರಿದಂತೆ ಒಟ್ಟು 40 ಬಿಜೆಪಿ ನಾಯಕರು ಸ್ಟಾರ್ ಪ್ರಚಾರಕರಾಗಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.

https://pragati.taskdun.com/ayanuru-manjunathvidhana-parishathresignbjp/

Related Articles

Back to top button